Welcome to Vani Vilas Public School

ಶ್ರೀರಾಘವೇಂದ್ರ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ

You are welcome

Discover our Top School Child Benefits

Events

“ಶಿಕ್ಷಕರ ದಿನಾಚರಣೆ”

ವಿದ್ಯಾರ್ಥಿಗಳನ್ನದೇಶದಸತ್ಪ್ರಜೆಗಳಾಗಿ ನಿರ್ಮಾಣಮಾಡುವ

ಸಮಾಜವನ್ನು ಮುಖ್ಯವಾಹಿನಿಗೆ ತರುವಲ್ಲಿ ಶಿಕ್ಷಕ-ಶಿಕ್ಷಕಿಯರ

ಜವಾಬ್ದಾರಿ ಮಹತ್ವದ್ದಾಗಿದೆ :ಆಲೂರುಹನುಮಂತರಾಯಪ್ಪ

ಹಿರಿಯೂರು :

ವಿದ್ಯಾರ್ಥಿಗಳನ್ನು ಈ ದೇಶದ ಸತ್ಪ್ರಜೆಗಳಾಗಿ ನಿರ್ಮಾಣ ಮಾಡುವ ಹಾಗೂ ಸಮಾಜವನ್ನು ಮುಖ್ಯವಾಹಿನಿಗೆ ತರುವಲ್ಲಿ ಶಿಕ್ಷಕ-ಶಿಕ್ಷಕಿಯರ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದ್ದು, ಇಂತಹ ಗುರುವೃಂದವನ್ನು ಇಂದು ನಾವುನೀವೆಲ್ಲರೂ ಸ್ಮರಿಸಬೇಕಿದೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ ಹೇಳಿದರು.

ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಆವರಣದಲ್ಲಿ “ಶಿಕ್ಷಕರ ದಿನಾಚರಣೆ” ಅಂಗವಾಗಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿಫುಲೆಯವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ, ನಂತರ ಅವರು ಮಾತನಾಡಿದರು.

ಆದರ್ಶ ಶಿಕ್ಷಕರೆಂದೇ ಹೆಸರಾದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಹುಟ್ಟುಹಬ್ಬವನ್ನು ದೇಶಾದ್ಯಂತ ಶಿಕ್ಷಕರ ದಿನಾಚರಣೆಯಾಗಿ ಆಚರಣೆ ಮಾಡಲಾಗುತ್ತಿದ್ದು, ಇಂತಹ ಶಿಕ್ಷಕರ ದಿನಾಚರಣೆಯಂದು ನಿಮ್ಮ ಭವಿಷ್ಯವನ್ನು ಉಜ್ವಲಗೊಳಿಸಲು ಶ್ರಮಿಸುತ್ತಿರುವ ನಮ್ಮ ಎಲ್ಲಾ ಶಿಕ್ಷಕ-ಶಿಕ್ಷಕಿಯರನ್ನು ಗೌರವಿಸಬೇಕಿದೆ ಎಂಬುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕರಾದ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಆಡಳಿತಾಧಿಕಾರಿ ಶ್ರೀಮತಿ ಹೇಮಲತಾ, ಶಿಕ್ಷಕ ಉಮೇಶ್ ಯಾದವ್, ಶಿಕ್ಷಕಿಯರುಗಳಾದ ರಜಿಯಾ, ಗಂಗಮ್ಮ, ರಂಜಿತಾ,ಇವರುಗಳನ್ನು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಕಿ ಶ್ರೀಮತಿ ಸಾಧಿಕಾರವರಿಗೆ ಇನ್ಸೆಂಟಿವ್ 5ಸಾವಿರ ರೂಗಳನ್ನು ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕರಾದ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಆಡಳಿತಾಧಿಕಾರಿ ಶ್ರೀಮತಿ ಹೇಮಲತಾ, ಶಿಕ್ಷಕಿಯರುಗಳಾದ ರಜಿಯಾ, ಗಂಗಮ್ಮ, ರಂಜಿತಾ, ಮುಬೀನಾ, ಸಾಧಿಕಾ, ಮಮತಾ, ಅಫ್ರೀನ್, ಕಾರ್ಯಕ್ರಮ ಸಂಯೋಜಕರಾದ ಭಾಗ್ಯ, ಪೂಜಾ, ಜಯಸುಧಾ, ಸುಲೋಚನಾ, ಶಿಕ್ಷಕ ಉಮೇಶ್ ಯಾದವ್, ಶಿವರಾಜ್ ನಾಯಕ್, ಸೇರಿದಂತೆ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Krishna Janmastami Photos (“ಶ್ರೀಕೃಷ್ಣ ಜನ್ಮಾಷ್ಠಮಿ”)

ಶ್ರೀಕೃಷ್ಣನಬಾಲಲೀಲೆಗಳನ್ನು ಅವರಆದರ್ಶಗಳನ್ನು ಮಕ್ಕಳಿಗೆ

ತಿಳಿಸುವ ಉದ್ದೇಶದಿಂದ ಶಾಲೆಯಲ್ಲಿ “ಶ್ರೀಕೃಷ್ಣ ಜನ್ಮಾಷ್ಠಮಿ”    

ಕಾರ್ಯಕ್ರಮ ಹಮ್ಮಿಕೊಂಡಿದೆ:ಆಲೂರುಹನುಮಂತರಾಯಪ್ಪ

ಹಿರಿಯೂರು :

ಲೋಕಕಲ್ಯಾಣಕ್ಕಾಗಿ ಅವತಾರ ತಾಳಿದ ಶ್ರೀಕೃಷ್ಣ ಪರಮಾತ್ಮನ ಜನ್ಮ ದಿನವನ್ನು “ಶ್ರೀಕೃಷ್ಣ ಜನ್ಮಾಷ್ಠಮಿ”ಯಾಗಿ ಆಚರಿಸಲಾಗುತ್ತಿದ್ದು, ಶ್ರೀಕೃಷ್ಣನ ಬಾಲಲೀಲೆಗಳನ್ನು ಅವರ ಆದರ್ಶಗಳನ್ನು ಮಕ್ಕಳಿಗೆ ತಿಳಿಸುವ ಉದ್ದೇಶದಿಂದ ನಮ್ಮ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರುಹನುಮಂತರಾಯಪ್ಪ ಹೇಳಿದರು.

ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ಶ್ರೀಕೃಷ್ಣ ಜನ್ಮಾಷ್ಠಮಿ” ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಶ್ರೀಕೃಷ್ಣನು ಜಗತ್ತಿಗೆ ಸಾರಿದ ಭಗವದ್ಗೀತೆಯ ಸಂದೇಶ ಸರ್ವಕಾಲೀಕವಾಗಿದ್ದು, ಭಗವದ್ಗೀತೆಯ ತಾತ್ಪರ್ಯವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳುವ ಮೂಲಕ ತಮ್ಮ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂಬುದಾಗಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ಇಸಿಓ ಗಳಾದ ಶಿವಾನಂದ್, ನಾಗರಾಜ್, ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕರಾದ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಆಡಳಿತಾಧಿಕಾರಿ ಶ್ರೀಮತಿ ಹೇಮಲತಾ, ಶಿಕ್ಷಕಿಯರುಗಳಾದ ಶ್ರೀಮತಿ ಗಂಗಮ್ಮ, ಶ್ರೀಮತಿ ಮಮತಾ, ಅಫ್ರೀನ್ ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ಭಾಗ್ಯ, ಶ್ರೀಮತಿ ಜಯಸುಧಾ, ಪೂಜಾ, ಶ್ರೀಮತಿ ಗೌತಮಿ, ಶಿಕ್ಷಕ ಉಮೇಶ್ ಯಾದವ್, ಶಿವರಾಜ್ ನಾಯಕ್, ಸೇರಿದಂತೆ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

“ಶಿಕ್ಷಕರ ದಿನಾಚರಣೆ”

ವಿದ್ಯಾರ್ಥಿಗಳನ್ನದೇಶದಸತ್ಪ್ರಜೆಗಳಾಗಿ ನಿರ್ಮಾಣಮಾಡುವ

                                                                             
ಸಮಾಜವನ್ನು ಮುಖ್ಯವಾಹಿನಿಗೆ ತರುವಲ್ಲಿ ಶಿಕ್ಷಕ-ಶಿಕ್ಷಕಿಯರ


ಜವಾಬ್ದಾರಿ ಮಹತ್ವದ್ದಾಗಿದೆ :ಆಲೂರುಹನುಮಂತರಾಯಪ್ಪ

ಹಿರಿಯೂರು :

ವಿದ್ಯಾರ್ಥಿಗಳನ್ನು ಈ ದೇಶದ ಸತ್ಪ್ರಜೆಗಳಾಗಿ ನಿರ್ಮಾಣ ಮಾಡುವ ಹಾಗೂ ಸಮಾಜವನ್ನು ಮುಖ್ಯವಾಹಿನಿಗೆ ತರುವಲ್ಲಿ ಶಿಕ್ಷಕ-ಶಿಕ್ಷಕಿಯರ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದ್ದು, ಇಂತಹ ಗುರುವೃಂದವನ್ನು ಇಂದು ನಾವುನೀವೆಲ್ಲರೂ ಸ್ಮರಿಸಬೇಕಿದೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ ಹೇಳಿದರು.

ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಆವರಣದಲ್ಲಿ “ಶಿಕ್ಷಕರ ದಿನಾಚರಣೆ” ಅಂಗವಾಗಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿಫುಲೆಯವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ, ನಂತರ ಅವರು ಮಾತನಾಡಿದರು.

ಆದರ್ಶ ಶಿಕ್ಷಕರೆಂದೇ ಹೆಸರಾದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಹುಟ್ಟುಹಬ್ಬವನ್ನು ದೇಶಾದ್ಯಂತ ಶಿಕ್ಷಕರ ದಿನಾಚರಣೆಯಾಗಿ ಆಚರಣೆ ಮಾಡಲಾಗುತ್ತಿದ್ದು, ಇಂತಹ ಶಿಕ್ಷಕರ ದಿನಾಚರಣೆಯಂದು ನಿಮ್ಮ ಭವಿಷ್ಯವನ್ನು ಉಜ್ವಲಗೊಳಿಸಲು ಶ್ರಮಿಸುತ್ತಿರುವ ನಮ್ಮ ಎಲ್ಲಾ ಶಿಕ್ಷಕ-ಶಿಕ್ಷಕಿಯರನ್ನು ಗೌರವಿಸಬೇಕಿದೆ ಎಂಬುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕರಾದ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಆಡಳಿತಾಧಿಕಾರಿ ಶ್ರೀಮತಿ ಹೇಮಲತಾ, ಶಿಕ್ಷಕ ಉಮೇಶ್ ಯಾದವ್, ಶಿಕ್ಷಕಿಯರುಗಳಾದ ರಜಿಯಾ, ಗಂಗಮ್ಮ, ರಂಜಿತಾ,ಇವರುಗಳನ್ನು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಕಿ ಶ್ರೀಮತಿ ಸಾಧಿಕಾರವರಿಗೆ ಇನ್ಸೆಂಟಿವ್ 5ಸಾವಿರ ರೂಗಳನ್ನು ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕರಾದ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಆಡಳಿತಾಧಿಕಾರಿ ಶ್ರೀಮತಿ ಹೇಮಲತಾ, ಶಿಕ್ಷಕಿಯರುಗಳಾದ ರಜಿಯಾ, ಗಂಗಮ್ಮ, ರಂಜಿತಾ, ಮುಬೀನಾ, ಸಾಧಿಕಾ, ಮಮತಾ, ಅಫ್ರೀನ್, ಕಾರ್ಯಕ್ರಮ ಸಂಯೋಜಕರಾದ ಭಾಗ್ಯ, ಪೂಜಾ, ಜಯಸುಧಾ, ಸುಲೋಚನಾ, ಶಿಕ್ಷಕ ಉಮೇಶ್ ಯಾದವ್, ಶಿವರಾಜ್ ನಾಯಕ್, ಸೇರಿದಂತೆ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

“ಶಿಕ್ಷಕರದಿನಾಚರಣೆ”

ಸಮಾಜಕ್ಕೆ ಜ್ಞಾನದ ಬೆಳಕನ್ನು ನೀಡುವ ಶಿಕ್ಷಕ ವೃತ್ತಿಯು

ಅತ್ಯಂತ ಪವಿತ್ರವು ಹಾಗೂಮಹತ್ವವಾದ ವೃತ್ತಿಯಾಗಿದೆ

ವಿಧಾನಪರಿಷತ್ ನ ಶಾಸಕರಾದಂತ ಡಿ.ಟಿ.ಶ್ರೀನಿವಾಸ್

ಹಿರಿಯೂರು :

ಸಮಾಜಕ್ಕೆ ಜ್ಞಾನದ ಬೆಳಕನ್ನು ನೀಡುವ ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರ ಹಾಗೂ ಮಹತ್ವವಾದ ವೃತ್ತಿಯಾಗಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಾಮಾಜಿಕ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸುವಲ್ಲಿ ಸದಾ ಶ್ರಮಿಸುತ್ತಾ ಈ ದೇಶದ ಭಾವೀ ಪ್ರಜೆಗಳನ್ನು ರೂಪಿಸುತ್ತಿರುವ ಎಲ್ಲಾ ಶಿಕ್ಷಕ-ಶಿಕ್ಷಕಿಯರುಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು ಎಂಬುದಾಗಿ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಡಿ.ಟಿ.ಶ್ರೀನಿವಾಸ್ ಅವರು ಹೇಳಿದರು.

ನಗರದ ಗುರುಭವನದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನದ ಅಂಗವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಶಿಕ್ಷಕರ ದಿನಾಚರಣಾ ಸಮಿತಿ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ “ಶಿಕ್ಷಕರದಿನಾಚರಣೆ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿಫುಲೆಯವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಶಿಕ್ಷಕರ ದಿನಾಚರಣೆಯಂತಹ ಕಾರ್ಯಕ್ರಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಗುರುಭವನವನ್ನು ಆಧುನಿಕ ರೀತಿಯಲ್ಲಿ ನವೀಕರಣ ಮಾಡುವುದು ನಮ್ಮ ಉದ್ದೇಶವಾಗಿತ್ತು, ಆದರೆ ಅದಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಲಿಲ್ಲ, ಆದ್ದರಿಂದ ಇನ್ನು ನೀವು ಈ ಹಳೆ ಗುರುಭವನದಲ್ಲಿ ಗಾಳಿ ಇಲ್ಲದೆ ಶಕೆಯಲ್ಲಿ ಗಾಳಿ ಬೀಸಿಕೊಂಡು ಕಾರ್ಯಕ್ರಮ ಮಾಡುವಂತಾಗಿದೆ.

ಈಗಲೂ ಕಾಲ ಮಿಂಚಿಲ್ಲ, ಶಿಕ್ಷಣ ಇಲಾಖೆ ಅಧಿಕಾರಿಗಳು ಸಹಕರಿಸಿದರೆ ಅಗತ್ಯ ಅನುದಾನ ತಂದು ಅತ್ಯಾಧುನಿಕ ರೀತಿಯಲ್ಲಿ ನೀವು ಆರಾಮವಾಗಿ ಉಲ್ಲಾಸದಿಂದ ಕುಳಿತು ಕಾರ್ಯಕ್ರಮ ಕೇಳುವಂತೆ ಈ ಗುರುಭವನವನ್ನು ಆಧುನಿಕ ರೀತಿಯಲ್ಲಿ ನಿರ್ಮಾಣ ಮಾಡೋಣ ಇದರಿಂದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುವ ನೌಕರರಿಗೆ ಅವರ ಸಣ್ಣಪುಟ್ಟ ಕಾರ್ಯಕ್ರಮಗಳಿಗೆ, ಮದುವೆ ಸಮಾರಂಭಗಳಿಗೆ ಗುರುಭವನ ಬಳಕೆಯಾಗಬೇಕು ಎಂಬುದು ನನ್ನ ಆಶಯವಾಗಿದೆ.

ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ಕ್ಷೇತ್ರದ ಶಾಸಕರಾಗಿದ್ದಾಗ ಶಿಕ್ಷಣಾಧಿಕಾರಿಗಳ ನೂತನ ಕಚೇರಿಯನ್ನು ಈ ಸ್ಥಳದಲ್ಲಿ ಕಟ್ಟುವಾಗ ಅನೇಕರು ಇದನ್ನು ಬಲವಾಗಿ ವಿರೋಧಿಸಿದ್ದರು, ಆದರೆ ಯಾರ ಪ್ರಭಾವಕ್ಕೂ ನಾವು ಮಣಿಯದೆ ನೂತನ ಕಚೇರಿಯನ್ನು ಇಲ್ಲಿ ನಿರ್ಮಿಸಲಾಯಿತು, ನಮ್ಮ ಯೋಜನೆಯಂತೆ ಕಟ್ಟಡ ನಿರ್ಮಿಸಿದ್ದರೆ ಆ ಕಟ್ಟಡದಲ್ಲಿ ಸಭಾಂಗಣ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳು ಇರುತ್ತಿದ್ದವು,

ಆದರೆ ಹಾಗಾಗಲಿಲ್ಲ, ಆದರೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೂತನ ಕಟ್ಟಡ ಬಸ್ ನಿಲ್ದಾಣದ ಎದುರು ನಿರ್ಮಾಣವಾದದ್ದು ನಮಗೆ ಸಮಾಧಾನ ತಂದಿದೆ, ಇದರಿಂದ ತಾಲ್ಲೂಕಿನ ವಿವಿಧ ಗ್ರಾಮೀಣ ಭಾಗಗಳಿಂದ ಬರುವ ವಿದ್ಯಾರ್ಥಿ-ಪೋಷಕರಿಗೆ, ಶಿಕ್ಷಕ-ಶಿಕ್ಷಕಿಯರಿಗೆ ಅತ್ಯಂತ ಅನುಕೂಲವಾಗಿದೆ ಎಂಬುದಾಗಿ ಅವರು ಹೇಳಿದರು.

ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾನಿಲಯದ ನಿರ್ದೇಶಕರು ಮತ್ತು ಕನ್ನಡಭಾರತಿ ಪ್ರಾಧ್ಯಾಪಕರಾದ ಡಾ.ನಲ್ಲಿಕಟ್ಟೆ ಎಸ್.ಸಿದ್ದೇಶ್ ಮಾತನಾಡಿ, ಆದರ್ಶ ಶಿಕ್ಷಕರಾಗಿ ಹೆಸರು ಮಾಡಿದ, ಶಿಕ್ಷಕರ ಕುಲಕ್ಕೆ ತಿಲಕವನ್ನಿಟ್ಟು ಪೂಜಿಸಿದಂತಹ, ಶಿಕ್ಷಕರ ಸ್ಥಾನಕ್ಕೆ ಮಹತ್ವದ ಗೌರರವನ್ನು ತಂದುಕೊಟ್ಟಂತಹ ಕೀರ್ತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್  ರವರಿಗೆ ಸಲ್ಲುತ್ತದೆ, ಅವರ ಋಣ ತೀರಿಸಬೇಕಾದರೆ ನಮ್ಮ ಶಿಕ್ಷಕ ವೃತ್ತಿಯನ್ನು ಅರ್ಥಪೂರ್ಣವಾಗಿ ನಿರ್ವಹಿಸಬೇಕು ಎಂದರಲ್ಲದೆ,

ಶಿಕ್ಷಕರಾದ ನಾವುಗಳು ನಮ್ಮ ಕಾಯಕವನ್ನು ನಿಷ್ಠೆಯಿಂದ ಮಾಡಬೇಕು, ನಮ್ಮ ಸಮಾಜದ ವೈದ್ಯ, ಪೋಲೀಸ್, ಸೈನಿಕ, ಇಂಜಿನಿಯರ್ ಹೀಗೆ ಎಲ್ಲಾ ವೃತ್ತಿಗಳನ್ನು ಹುಟ್ಟುಹಾಕುವ ಶಕ್ತಿ ನಮ್ಮ ಶಿಕ್ಷಕವೃಂದದವರಿಗಿದ್ದು, ಇಂತಹ ಪವಿತ್ರವಾದ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿರುವ ಶಿಕ್ಷಕರು ಯಾವುದೇ ಸ್ವಾರ್ಥವಿಲ್ಲದೆ ನಿರ್ವಂಚನೆಯಿಂದ ವಿದ್ಯಾರ್ಥಿಗಳನ್ನು ಶ್ರೇಷ್ಠ ವ್ಯಕ್ತಿಗಳಾಗಿ ನಿರ್ಮಾಣ ಮಾಡಿ, ಸಮಾಜಕ್ಕೆ ಕೊಡುಗೆ ನೀಡಬೇಕು ಎಂಬುದಾಗಿ ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ತಾಲ್ಲೂಕಿನಲ್ಲಿ ಅತ್ಯಂತ ಉತ್ತಮ ಹಾಗೂ ಅತ್ಯಂತ ಪ್ರತಿಭಾವಂತ ಶಿಕ್ಷಕ-ಶಿಕ್ಷಕಿಯರಿದ್ದು, ಕಳೆದ ಸಾಲಿಗಿಂತ ಶೈಕ್ಷಣಿಕ ಪ್ರಗತಿಯಲ್ಲಿ ಈ ಸಾಲಿನಲ್ಲಿ ಸುಮಾರು ಶೇ.27 ರಷ್ಟು ಪ್ರಗತಿ ಸಾಧಿಸಲಾಗಿದೆ, ಇದಕ್ಕಾಗಿ ಈ ಶಿಕ್ಷಕ ದಿನಾಚರಣೆಯಂದು ಅವರಿಗೆ ಅನಂತಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರಲ್ಲದೆ,

ಇಂದು ಇಂತಹ ಶಿಕ್ಷಕ-ಶಿಕ್ಷಕಿಯರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅವರನ್ನು ಗುರುತಿಸಿ, ಪ್ರಶಸ್ತಿಪತ್ರ ನೀಡಿಸನ್ಮಾನಿಸಲಾಗುತ್ತಿದ್ದು, ಜೊತೆಗೆ ಉತ್ತಮ ಶಿಕ್ಷಣ ಸಂಸ್ಥೆಗಳನ್ನು ಗುರುತಿಸಿ ಸನ್ಮಾನಿಸಲಾಗುತ್ತಿದೆ ನಮ್ಮ ಶಿಕ್ಷಕರುಗಳು ಶಾಲಾ ಪಠ್ಯ ಚಟುವಟಿಕೆಗಳ ಜೊತೆಗೆ ಸ್ಯಾಟ್ಸ್ ಎಂಟ್ರಿ, ಮಕ್ಕಳಹಾಜರಾತಿ, ಎಲ್.ಬಿ.ಎಸೇರಿದಂತೆ ವಿವಿಧ ಅಂಶಗಳನ್ನು ಸಮಯಕ್ಕೆ ಸರಿಯಾಗಿ ದಾಖಲಿಸಿ, ಉತ್ತಮ ಶೈಕ್ಷಣಿಕ ಪ್ರಗತಿ ಸಾಧಿಸಲು ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂಬುದಾಗಿ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನ ಖಾಸಗಿ ಅನುದಾನರಹಿತ ಶಾಲೆಗಳ ವತಿಯಿಂದ ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾನಿಲಯದ ನಿರ್ದೇಶಕರು ಮತ್ತು ಕನ್ನಡಭಾರತಿ ಪ್ರಾಧ್ಯಾಪಕರಾದ ಡಾ.ನಲ್ಲಿಕಟ್ಟೆಎಸ್.ಸಿದ್ದೇಶ್, ಕ್ಷೇತ್ರಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿ ಆರ್.ಟಿ.ಎಸ್ ಶ್ರೀನಿವಾಸ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ರಮೇಶ್, ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷೆ ಶ್ರೀಮತಿ ವಿ.ಭಾಗ್ಯ, ಉಪನ್ಯಾಸಕರ ಸಂಘದ ಅಧ್ಯಕ್ಷ ಜಿ.ಆರ್.ನರೇಂದ್ರ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಲೋಹಿತ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಸನ್ನಕುಮಾರ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಹನುಮಂತರೆಡ್ಡಿ, ರಮೇಶ್ ನಾಯ್ಕ, ತಾಲ್ಲೂಕು ಅಧ್ಯಕ್ಷೆ ಶ್ರೀಮತಿ ಸುನಂದಮ್ಮ, ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಲಿಂಗಪ್ಪ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಜಗದೀಶ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶಿವಮೂರ್ತಿ, ನಾಗರಾಜ್, ಪ್ರಾಥಮಿಕ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ರಾಜಪ್ಪ, ಉರ್ದು ಶಿಕ್ಷಕರ ಸಂಘದ ಕುಷ್ಬುದಾ, ಇಸಿಓಗಳಾದ ನಾಗರಾಜ್, ಸೈಯದ್ ಜಾಫರ್, ಮಲ್ಲಿಕಾರ್ಜುನ್, ರಂಗಸ್ವಾಮಿ, ಸಿ.ಆರ್.ಪಿಗಳಾದ ಪ್ರಸನ್ನ, ನಾಗರಾಜ್, ಕರಿಯಪ್ಪ, ಆಶಾಲತಾ, ಸೇರಿದಂತೆ ಶಿಕ್ಷಣ ಇಲಾಖೆಯ ವಿವಿಧ ನೌಕರರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆರಂಭದಲ್ಲಿ ಶಿಕ್ಷಣ ಸಂಯೋಜಕರಾದ ಶಿವಾನಂದ್ ಕಾರ್ಯಕ್ರಮಕ್ಕೆ ಎಲ್ಲರನ್ನು ಸ್ವಾಗತಿಸಿದರು. ಶ್ರೀಮತಿ ರಾಧಾಹಬ್ಬಿನಹೊಳೆ ಹಾಗೂ ಗಿರೀಶ್ ವಿ.ಕೆ.ಗುಡ್ಡ ಕಾರ್ಯಕ್ರಮ ನಿರೂಪಿಸಿದರು.ಕೊನೆಯಲ್ಲಿ ಇಸಿಓ ಪುಟ್ಟಸ್ವಾಮಿ ವಂದನಾರ್ಪಣೆ ನೆರವೇರಿಸಿದರು.

Do you have a contact ?

Get in touch with us to discuss it:

Address

No, 736/2, Neharu Stadium, Hiriyur - 577 598, Chitradurga Dist.

T: 9845040555/9986125422 E: vanivilasahyr1@gamil.com

Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.

2025-26ನೇ ಸಾಲಿನ “ಪ್ರತಿಭಾಪುರಸ್ಕಾರ” ಕಾರ್ಯಕ್ರಮ

ನಗರದರೆಡ್ ಕ್ರಾಸ್ ಮತ್ತು ರೋಟರಿಸಂಸ್ಥೆಗಳು ಪ್ರತಿಭಾವಂತ

ವಿದ್ಯಾರ್ಥಿಗಳ ಗುರುತಿಸಿ, ಪ್ರೋತ್ಸಾಹಿಸುತ್ತಿರುವುದು ನಿಜಕ್ಕೂ

ಶ್ಲಾಘನೀಯ ಕಾರ್ಯ:ನಿವೃತ್ತನ್ಯಾಯಾಧೀಶ ಸಂತೋಷ್ ಹೆಗಡೆ

ಹಿರಿಯೂರು :                                             

ರೆಡ್ ಕ್ರಾಸ್ ಸಂಸ್ಥೆ ಹಾಗೂ ರೋಟರಿ ಸಂಸ್ಥೆಗಳು ಹಿರಿಯೂರು ತಾಲ್ಲೂಕಿನಲ್ಲಿ ಕಳೆದ 13 ವರ್ಷಗಳಿಂದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಅವರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿಭಾಪುರಸ್ಕಾರ ಕಾರ್ಯಕ್ರಮ ನಡೆಸಿಕೊಂಡು ಬಂದಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ ಎಂಬುದಾಗಿ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ  ಎನ್.ಸಂತೋಷ್ ಹೆಗಡೆ ಹೇಳಿದರು.

ನಗರದ ರೋಟರಿ ಸಭಾಭವನದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ರೋಟರಿ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ಯಶಸ್ವಿಯಾಗಿ 13ನೇ ಬಾರಿಗೆ ಅರ್ಜಿ ಸ್ವೀಕರಿಸಿದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ 2025-26ನೇ ಸಾಲಿನ “ಪ್ರತಿಭಾಪುರಸ್ಕಾರ” ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಪ್ರತಿಭಾವಂತ ವಿದ್ಯಾರ್ಥಿಗಳು ನಮ್ಮ ದೇಶದ ಭಾವೀ ಪ್ರಜೆಗಳಾಗಿದ್ದು, ನೀವುಗಳು ದುರಾಸೆಯಿಂದ ದೂರವಿರಬೇಕು, ಜೀವನದಲ್ಲಿ ತೃಪ್ತಿ ಮತ್ತು ಮಾನವೀಯತೆಯ ಗುಣಗಳನ್ನು ಬೆಳೆಸಿಕೊಳ್ಳುವ ಮೂಲಕ ಆದರ್ಶ ಸಮಾಜವನ್ನು ನಿರ್ಮಾಣ ಮಾಡಬೇಕು, ಈ ನಿಟ್ಟಿನಲ್ಲಿ ಪೋಷಕರು ಮಕ್ಕಳಿಗೆ ಸರಿಯಾದ ಮಾರ್ಗದರ್ಶನವನ್ನು ನೀಡಿ, ಮಕ್ಕಳನ್ನು ಸುಸಂಸ್ಕೃತರನ್ನಾಗಿ ಮಾಡಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂಬುದಾಗಿ ಹೇಳಿದರು.

ನಾನು ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶನಾಗಿ ಮರಣ ದಂಡನೆಯಂತಹ ಶಿಕ್ಷೆಯನ್ನು ಸಹ ನೀಡಿದ್ದೇನೆ, ಆದರೆ ಲೋಕಾಯುಕ್ತನಾಗಿ ಕಾರ್ಯ ನಿರ್ವಹಿಸುವಾಗ ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯ ಹಾಗೂ ಭ್ರಷ್ಟಾಚಾರ ಬೇರೆಲ್ಲೂ ಇಲ್ಲ ಅನ್ನಿಸಿತು, ಸಾರ್ವಜನಿಕರಿಗೆ ಬಳಕೆಯಾಗಬೇಕಾದ ಕೋಟ್ಯಾಂತರ ರೂಪಾಯಿ ಹಣ ಲೂಟಿಯಾಗಿ ಕೆಲವೇ ಕೆಲವು ಅಧಿಕಾರಿಗಳ ಖಾತೆಗೆ ಸೇರಿರುವುದು ಕಂಡು ನಿಜಕ್ಕೂ ಬೇಸರವಾಯಿತು ಎಂದರಲ್ಲದೆ,

ನಮ್ಮ ಪೀಳಿಗೆಯವರು ಮಾಡಿರುವ ತಪ್ಪನ್ನು ಇಂದಿನ ಯುವಪೀಳಿಗೆಯವರಾದ ನೀವುಗಳು ಸರಿಪಡಿಸುವ ಪ್ರಯತ್ನ ಮಾಡಬೇಕು, ಪೋಷಕರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಅನ್ಯಾಯ, ಅಕ್ರಮ, ಭ್ರಷ್ಟಾಚಾರದ ವಿರುದ್ಧ ಹೋರಾಡಲು ಪ್ರೇರೇಪಿಸಬೇಕು, ನಿಮ್ಮ ಜೀವನದಲ್ಲಿ ಸತ್ಯ, ಪ್ರಾಮಾಣಿಕತೆ, ಕರ್ತವ್ಯನಿಷ್ಠೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂಬುದಾಗಿ ಹೇಳಿದರು.

ಜಿ.ಪಂ.ಮಾಜಿ ಅಧ್ಯಕ್ಷರಾದ ಬಿ.ಎಸ್.ರಘುನಾಥ್ ಮಾತನಾಡಿ, ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆಯಿಂದ ಈ ಬಾರಿ ನಡೆಯುತ್ತಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ನಿವೃತ್ತ ನ್ಯಾಯಾಧೀಶರಾದ ಶ್ರೀಯುತ ಸಂತೋಷ್ ಹೆಗಡೆಯವರು ಆಗಮಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸುತ್ತಿರುವುದು ನಿಜಕ್ಕೂ ಸಂತಸದ ವಿಚಾರ, ವಿದ್ಯಾರ್ಥಿಗಳು ಸಂತೋಷ್ ಹೆಗಡೆಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬುದಾಗಿ ಹೇಳಿದರು.

ರೆಡ್ ಕ್ರಾಸ್ ಛೇರ್ಮನ್ ಹೆಚ್.ಎಸ್.ಸುಂದರ್ ರಾಜ್ ಮಾತನಾಡಿ, ನಮ್ಮ ಹಿರಿಯೂರು ರೆಡ್ ಕ್ರಾಸ್ ಸಂಸ್ಥೆಯು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದು, ಕಳೆದ 13 ವರ್ಷಗಳಿಂದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಪ್ರೋತ್ಸಾಹ ನೀಡುವುದು ನಮ್ಮ ಉದ್ದೇಶವಾಗಿದೆ ಎಂಬುದಾಗಿ ಹೇಳಿದರು.

ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರು ಹಾಗೂ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಆಲೂರುಹನುಮಂತರಾಯಪ್ಪನವರು ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಪ್ರತಿಯೊಬ್ಬ ವಿದ್ಯಾರ್ಥಿಯೂ ಪ್ರತಿಭಾವಂತರಾಗಿದ್ದು, ಪೋಷಕರು ಮಕ್ಕಳ ಮನಸ್ಸಿನಲ್ಲಿ ಕನಸುಗಳನ್ನು ತುಂಬುವ ಮೂಲಕ ಅವರ ಆಸಕ್ತಿಯಿರುವ ಕ್ಷೇತ್ರದಲ್ಲಿ ಬೆಳೆಯಲು ಅವಕಾಶ ಕಲ್ಪಿಸಿಕೊಟ್ಟು, ಸಮಾಜದಲ್ಲಿ ಶ್ರೇಷ್ಠವ್ಯಕ್ತಿಗಳಾಗಿ ಹೊರಹೊಮ್ಮುವಂತೆ ಮಾಡಬೇಕು ಎಂಬುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆ ಚಿತ್ರದುರ್ಗ ಜಿಲ್ಲಾ ಛೇರ್ಮನ್ ಗಾಯತ್ರಿಶಿವರಾಂ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಆಡಳಿತ ಮಂಡಳಿ ಸದಸ್ಯರಾದ ಅನಂತರೆಡ್ಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ, ಸನ್ಮಾನಿಸಿ, ಗೌರವಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಸಂಸ್ಥೆಯ ಅಧ್ಯಕ್ಷರಾದ ವಸಂತ್ ಕುಮಾರ್ ವಹಿಸಿದ್ದರು. ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ  ಎನ್.ಸಂತೋಷ್ ಹೆಗಡೆ, ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಛೇರ್ಮನ್ ಹೆಚ್.ಎಸ್.ಸುಂದರ್ ರಾಜ್, ಜಿ.ಪಂ.ಮಾಜಿ ಅಧ್ಯಕ್ಷರಾದ ಬಿ.ಎಸ್.ರಘುನಾಥ್, ರೆಡ್ ಕ್ರಾಸ್ ಸಂಸ್ಥೆ ಚಿತ್ರದುರ್ಗ ಜಿಲ್ಲಾ ಛೇರ್ಮನ್ ಗಾಯತ್ರಿಶಿವರಾಂ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಆಡಳಿತ ಮಂಡಳಿ ಸದಸ್ಯರಾದ ಅನಂತರೆಡ್ಡಿ, ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರು ಹಾಗೂ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ, ರೆಡ್ ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಎಂ.ಎಸ್.ರಾಘವೇಂದ್ರ, ರೋಟರಿ ಕಾರ್ಯದರ್ಶಿ ಚಂದ್ರಹಾಸ್, ಖಜಾಂಚಿ ಸಣ್ಣಭೀಮಣ್ಣ, ನಾರಾಯಣಾಚಾರ್, ಸಿವಿಲ್ ಇಂಜಿನಿಯರ್ ಗಿರಿದಾಸ್, ಸಮಾಜಸೇವಕಿ ಶ್ರೀಮತಿ ಶಶಿಕಲಾ ರವಿಶಂಕರ್, ಗೀತಾರಾಧಾಕೃಷ್ಣನ್, ಎ.ರಾಘವೇಂದ್ರ, ಟಿ.ಮಲ್ಲೇಶಪ್ಪ, ಆಲೂರುಸಿದ್ಧರಾಮಣ್ಣ, ಮಹಾಬಲೇಶ್ವರಶೆಟ್ಟಿ, ದೇವರಾಜ್ ಮೂರ್ತಿ, ಎಲ್.ಆನಂದಶೆಟ್ಟಿ, ರಾಧಾಕೃಷ್ಣನ್, ಪಿ.ಆರ್.ಸತೀಶ್ ಬಾಬು, ಆಕಾಶವಾಣಿ ನವೀನ್ ಮಸ್ಕಲ್, ಪೋಲೀಸ್ ಭೇಟೆ ಪ್ರಸನ್ನ, ಸೇರಿದಂತೆ ರೆಡ್ ಕ್ರಾಸ್ ಸಂಸ್ಥೆ ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಆರಂಭದಲ್ಲಿ ಶ್ರೀಮತಿ ಗೀತಾರಾಧಾಕೃಷ್ಣರವರು ಪ್ರಾರ್ಥಿಸಿದರು. ನಿವೃತ್ತ ಪ್ರಾಂಶುಪಾಲರಾದ ಡಾ.ಡಿ.ಧರಣೇಂದ್ರಯ್ಯ ಕಾರ್ಯಕ್ರಮಕ್ಕೆ ಎಲ್ಲರನ್ನು ಸ್ವಾಗತಿಸಿದರು.ರೆಡ್ ಕ್ರಾಸ್ ಸಂಸ್ಥೆ ಎ.ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಎಂ.ಎಸ್.ರಾಘವೇಂದ್ರ ವಂದನಾರ್ಪಣೆ ನೆರವೇರಿಸಿದರು.